ಕಾರವಾರ: ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಅಪಹರಣಕ್ಕೊಳಗಾಗಿದ್ದ ಬಾಲಕ ಗೋವಾದಲ್ಲಿ ಪತ್ತೆಯಾಗಿದ್ದಾನೆ.
ದುಷ್ಕರ್ಮಿಗಳು ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಅಪಹರಣಕಾರರ ಜಾಡು ಹಿಡಿದ ಭಟ್ಕಳ ನಗರ ಠಾಣೆ ಪೊಲೀಸರು ಇದೀಗ ಬಾಲಕನನ್ನು ಗೋವಾದಲ್ಲಿ ಪತ್ತೆ ಮಾಡಿ ರಕ್ಷಿಸಿದ್ದಾರೆ.
ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ. ಕುಟುಂಬದವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಕೌಟುಂಬಿಕ ದ್ವೇಷದ ಕಾರಣಕ್ಕೆ ಬಾಲಕನನ್ನು ಅಪಹರಿಸಿದ್ದರು ಎಂದು ತಿಳಿದುಬಂದಿದೆ.