ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ರೂವಾರಿ ಪ್ರಜ್ವಲ್ ರೇವಣ್ಣ ಬಂಧನವಾಗಿದ್ದು, ಅವರ ತಾಯಿ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಭವಾನಿ ರೇವಣ್ಣ ನಾಪತ್ತೆಯಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಎಸ್ಐಟಿ ಶೋಧ ನಡೆಸಿದೆ.
ಅಶ್ಲೀಲ ವಿಡಿಯೋ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಂಡಿತ್ತು. ಹೀಗಾಗಿ ಭವಾನಿ ರೇವಣ್ಣ ಅವರ ಬಂಧನ ಬಹುತೇಕ ಖಚಿತವಾಗಿದೆ. ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಜಾರಿ ಮಾಡಿದೆ. ಹಾಸನ ಜಿಲ್ಲೆ ಹೊಳೆನರಸೀಪುರದ ನಿವಾಸದಲ್ಲಿ ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ.