ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಮನೆ ಕೆಲಸದ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದಲ್ಲಿ ಭವಾನಿ ರೇವಣ್ಣಗೆ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಬಂಧನ ಭೀತಿ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್ ಇದೀಗ ಅರ್ಜಿ ಕುರಿತು ಆದೇಶ ನೀಡಿದೆ.
ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿರುವ ನ್ಯಾಯಾಲಯ, ನಾಳೆಯೇ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು, ಬಂಧನ ಭೀತಿ ಶುರುವಾಗಿದೆ.