ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ.
ಭವಾನಿಯವರ ಅರ್ಜಿ ಸಂಬಂಧ ಜೂನ್ 14ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿದ್ದು, ಇಂದು ಬೆಳಗ್ಗೆ ಪ್ರಕಟಿಸಲಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಭವಾನಿ ಅವರಿಗೆ ಎಸ್ಐಟಿಯಿಂದ ಬಂದನ ಭೀತಿ ಎದುರಾಗಿದೆ. ಇಂದು ಹೈಕೋರ್ಟ್ ಜಾಮೀನು ಅರ್ಜಿ ಕುರಿತ ತೀರ್ಪು ಪ್ರಕಟಿಸಲಿದ್ದು, ಜಾಮೀನು ಸಿಗುತ್ತಿದ್ದರೆ ಎಸ್ಐಟಿ ಅವರನ್ನು ಬಂಧಿಸಲಿದೆ ಎನ್ನಲಾಗಿದೆ.