ಹಾಸನ: ಕೆಲಸದ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಭವಾನಿ ರೇವಣ್ಣ ವಿಚಾರಣೆಗಾಗಿ ಅವರ ನಿವಾಸಕ್ಕೆ ತೆರಳಿದ್ದಾರೆ.
ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿ ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗದೇ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ಭವಾನಿ ರೇವಣ್ಣಗೆ ಹಿನ್ನಡೆಯಾಗಿತ್ತು. ಕೋರ್ಟ್ ನಿರೀಕ್ಷಣಾ ಜಾಮಿನು ಅರ್ಜಿಯನ್ನು ನಿನ್ನೆ ವಜಾಗೊಳಿಸಿತ್ತು. ಇಂದು ವಿಚಾರಣೆ ನಡೆಸುವಂತೆ ಎಸ್ಐಟಿಗೆ ಸೂಚಿಸಿತ್ತು.
ಇದೀಗ ಎಸ್ಐಟಿ ಇನ್ಸ್ ಪೆಕ್ಟರ್ ಶ್ರೀಧರ್ ನೇತೃತ್ವದ ತಂಡ ಹಾಸನದ ಹೊಳೆನರಸೀಪುರದ ನಿವಾಸಕ್ಕೆ ತೆರಳಿದ್ದು, ಭವಾನಿ ರೇವಣ್ಣ ವಿಚಾರಣೆ ನಡೆಸಿದ್ದಾರೆ. ಇನ್ನೊಂದೆಡೆ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಬಂಧನ ಭೀತಿಯಲ್ಲಿದ್ದಾರೆ.