ಬೆಂಗಳೂರು : ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಭಾಗ್ಯಗಳ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರಲು ಸಿದ್ದತೆ ನಡೆಸಿದೆ.
ಹೌದು. ಮನೆ ಮನೆಗೆ ಕ್ಲಿನಿಕ್ ಸೇವೆ, ಉಚಿತ ಔಷಧಿ ನೀಡುವ ಮತ್ತೊಂದು ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ಸರ್ಕಾರ ಸಿದ್ದತೆ ನಡೆಸಿದೆ. ಮೆಡಿಸಿನ್ ಗಾಗಿ ನೀವು ಮೆಡಿಕಲ್ ಅಲೆಯೋ ಅಗತ್ಯ ಇರುವುದಿಲ್ಲ. ನಿಮ್ಮ ಮನೆ ಬಾಗಿಲಿಗೆ ಔಷಧ ಬರಲಿದೆ. ಮನೆ ಬಾಗಿಲಿಗೆ ಉಚಿತ ಔಷಧಿ ಹಾಗೂ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ.
ವೈದ್ಯರು ಕ್ಯಾನ್ಸರ್, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ನಿಮ್ಮ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ನಿಮ್ಮ ಮನೆಯಲ್ಲೇ ಫ್ರೀ ಆಗಿ ನೀಡಲಿದ್ದಾರೆ . ಇದಕ್ಕೆ ನೀವು ಯಾವುದೇ ಹಣ ಕೊಡುವ ಅಗತ್ಯ ಇಲ್ಲ. ಈ ಹಿನ್ನೆಲೆ ಸರ್ಕಾರ ಪ್ರತ್ಯೇಕ ಸಿಬ್ಬಂದಿ ನೇಮಕಾತಿ ವೈದ್ಯರ ನೇಮಕಾತಿಗೆ ಕೂಡ ಇಲಾಖೆ ಮುಂದಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಇದಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ರೆ ಸದ್ಯದಲ್ಲೇ ಯೋಜನೆ ಜಾರಿಯಾಗಲಿದೆ ಎಂದು ಹೇಳಲಾಗಿದೆ.