
ದುನಿಯಾ ವಿಜಯ್ ನೀದೇಶಿಸಿ ನಾಯಕನಾಗಿರುವ ಈ ಚಿತ್ರದಲ್ಲಿ ಅಶ್ವಿನಿ ನಾಯಕಿಯಾಗಿ ಅಭಿನಯಿಸಿದ್ದು, ಕಲ್ಯಾಣಿ ರಾಜು, ಡ್ರ್ಯಾಗನ್ ಮಂಜು, ಪ್ರಿಯಾ ಶತಮರ್ಶನ್, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಉಳಿದ ಪಾತ್ರವರ್ಗದಲ್ಲಿದ್ದಾರೆ. ಕೃಷ್ಣ ಕ್ರಿಯೇಶನ್ಸ್ ಹಾಗೂ ಜಗದೀಶ್ ಫಿಲಂಸ್ ಬ್ಯಾನರ್ ನಲ್ಲಿ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣ ಮಾಡಿದ್ದು, ಧನಂಜಯ್ ನೃತ್ಯ ನಿರ್ದೇಶನ, ಮಾಸ್ತಿ ಸಂಭಾಷಣೆ, ಶಿವಸೇನಾ ಛಾಯಾಗ್ರಹಣವಿದೆ. ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ.