ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರ ಇದೇ ಆಗಸ್ಟ್ 9ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದ್ದು, ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ತನ್ನ ಹಾಡುಗಳ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ಈ ಸಿನಿಮಾ ಮೇಲೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿತ್ತಲೇ ಇದೆ. ಬಿಡುಗಡೆ ದಿನಾಂಕ ಹತ್ತಿರವಿರುವ ಕಾರಣ ಇದೇ ಆಗಸ್ಟ್ ಮೂರರಂದು ಟ್ರೈಲರ್ ರಿಲೀಸ್ ಮಾಡುವುದಾಗಿ ನಿರ್ಮಾಪಕ ಕೃಷ್ಣ ಸಾರ್ಥಕ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.
ಈ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಅಶ್ವಿನಿ ಪ್ರಮುಖ ಪಾತ್ರದಲ್ಲಿದ್ದು, ಕಲ್ಯಾಣಿ ರಾಜು, ಪ್ರಿಯಾ ಶತಮರ್ಶನ್, ಅಚ್ಯುತ್ ಕುಮಾರ್, ರಂಗಾಯಣ ರಘು, ಕಾಕ್ರೋಚ್ ಸುಧಿ, ಉಳಿದ ಪಾತ್ರವರ್ಗದಲ್ಲಿದ್ದಾರೆ. ಕೃಷ್ಣ ಕ್ರಿಯೇಶನ್ಸ್ ಮತ್ತು ಜಗದೀಶ ಫಿಲಂಸ್ ಬ್ಯಾನರ್ ನಡಿ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದು ಶಿವ ಸೇನಾ ಅವರ ಛಾಯಾಗ್ರಹಣವಿದೆ.