
ಕಲಬುರಗಿ: ಭೀಮಾ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್ (16) ಮೃತ ಬಾಲಕ. ಚನ್ನೂರು ಬಳಿ ಆದರ್ಶ ವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಪ್ರಜ್ವಲ್, ಇಂಗ್ಲೀಷ್ ಪರೀಕ್ಷೆ ಬರೆದು ರಜೆ ಇದ್ದ ಕಾರಣಕ್ಕೆ ಸ್ವಗ್ರಾಮಕ್ಕೆ ಬಂದಿದ್ದ. ಬಿಸಿಲ ಝಳ ಹಿನ್ನೆಲೆಯಲ್ಲಿ ಭೀಮಾ ನದಿಗೆ ಈಜಲು ಹೋಗಿದ್ದ. ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿದ್ದಾನೆ.
ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ವಿದ್ಯಾರ್ಥಿ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.