ಬಾಲಿವುಡ್ ನ ಹಿರಿಯ ನಟ ವಿಕ್ರಂ ಗೋಖಲೆ ಅನಾರೋಗ್ಯದ ಹಿನ್ನಲೆಯಲ್ಲಿ ಕಳೆದ 15 ದಿನಗಳಿಂದ ಪುಣೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಪುಣೆಯ ದೀನನಾಥ ಮಂಗೇಶ್ಕರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ವಿಕ್ರಂ ಗೋಖಲೆಯವರು ಹಮ್ ದಿಲ್ ದೇ ಚುಕೆ ಸನಂ, ಬುಲ್ ಬೂಲಯ್ಯ, ದಿಲ್ ಸೆ, ದೇ ಧನಾಧನ್, ಮಿಷನ್ ಮಂಗಲ್ ಸೇರಿದಂತೆ ಹಲವಾರು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದಾರೆ.
ಈ ಹಿಂದೆ ನಟಿ ಕಂಗನಾ ರಣಾವತ್ 1947ರಲ್ಲಿ ನಮಗೆ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ, ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಸಂದರ್ಭದಲ್ಲಿ ನಟ ವಿಕ್ರಂ ಗೋಖಲೆ ಅವರನ್ನು ಬೆಂಬಲಿಸಿದ್ದರು.