ಆಹಾರ ಸುರಕ್ಷತೆ ಕುರಿತಂತೆ ಮಧ್ಯಪ್ರದೇಶದ ಭೋಪಾಲ್ ಜಿಲ್ಲಾ ಆಡಳಿತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಪಕೋಡಾ, ಬಜ್ಜಿ, ಮಸಾಲಾ ಮಂಡಕ್ಕಿ, ಗೋಬಿ ಮಂಚೂರಿ ಸೇರಿದಂತೆ ಯಾವುದೇ ಆಹಾರ ಪದಾರ್ಥಗಳನ್ನು ಪೇಪರ್ ನಲ್ಲಿ ಕಟ್ಟಿ ಪಾರ್ಸೆಲ್ ನೀಡದಂತೆ ಆದೇಶ ಹೊರಡಿಸಿದೆ.
ಈ ನಿಯಮವನ್ನು ವ್ಯಾಪಾರಸ್ಥರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದ್ದು, ಆದೇಶ ಉಲ್ಲಂಘಿಸಿದವರಿಗೆ 2 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ. ಈ ಕುರಿತಂತೆ ಭೋಪಾಲ್ ಜಿಲ್ಲಾಧಿಕಾರಿ ಅವಿನಾಶ್ ಈಗಾಗಲೇ ಸುತ್ತೋಲೆ ಹೊರಡಿಸಿದ್ದಾರೆ.
ಪ್ರಿಂಟ್ ಆಗಿರುವ ಪೇಪರ್ ನಲ್ಲಿನ ಇಂಕ್ ಹಲವು ವಿಷಕಾರಿ ಅಂಶಗಳನ್ನು ಒಳಗೊಂಡಿರುತ್ತದೆ ಎನ್ನಲಾಗಿದ್ದು, ಹೀಗಾಗಿ ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಇಂತಹದೊಂದು ಕ್ರಮ ಕೈಗೊಳ್ಳಲಾಗಿದೆ. ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಸಂಸ್ಥೆ FSSAI ಕೂಡ ಈ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ನೀಡಿದೆ.