ಬೆಂಗಳೂರು: ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದಲೇ ಹಣ ಪಡೆದ ಆರೋಪದಲ್ಲಿ ತನಿಖಾಧಿಕಾರಿಯನ್ನು ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ.
ಎ.ಡಿ.ನಾಗರಾಜ್ ಅಮಾನತುಗೊಂಡಿರುವ ತನಿಖಾಧಿಕಾರಿ. ಭೋವಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಆದರೆ ತನಿಖಾಧಿಕಾರಿಯಾಗಿದ್ದ ಎ.ಡಿ.ನಾಗರಾಜ್ ಆರೋಪಿಗಳಿಂದಲೇ ಅವರು ಹಣ ಪಡೆದಿರುವ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಎ.ಡಿ.ನಾಗರಾಜ್, ಲೀಲಾವತಿ ಸೇರಿ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು ಇದೀಗ ಆರೋಪಿಗಳಿಂದ ಹಣ ಪಡೆದು, ಭ್ರಷ್ಟಾಚಾರ ನಡೆಸಿದ ಹಿನ್ನೆಲೆಯಲ್ಲಿ ಎ.ಡಿ.ನಾಗರಾಜ್ ಅವರನ್ನು ಅಮಾನತುಗೊಳಿಸಿ ಸಿಐಡಿ ಡಿಜಿ ಸಲೀಂ ಆದೇಶ ಹೊರಡಿಸಿದ್ದಾರೆ.