ಮಂಡ್ಯ: ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೆಜ್ಜೆ ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ನ್ಯಾಮನಹಳ್ಳಿಯಿಂದ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು, ಅವರಿಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಕೆ.ಸಿ. ವೇಣುಗೋಪಾಲ್, ಕೆ.ಹೆಚ್. ಮುನಿಯಪ್ಪ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.
ಇದೇ ಮೊದಲ ಬಾರಿಗೆ ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಸೋನಿಯಾ ಗಾಂಧಿ ಭಾಗವಹಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತಂದಿದೆ. ಸುಮಾರು ಅರ್ಧ ಕಿಮೀ ದೂರ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ ನಂತರ ರಾಹುಲ್ ಗಾಂಧಿ ಸೂಚನೆ ಮೇರೆಗೆ ಕಾರ್ ಹತ್ತಿದ್ದಾರೆ. ಹತ್ತು ನಿಮಿಷಕ್ಕೂ ಅಧಿಕ ಕಾಲ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಅವರು ರಾಹುಲ್ ಸೂಚನೆ ಮೇರೆಗೆ ವಿಶ್ರಾಂತಿಗೆ ತೆರಳಿದ್ದಾರೆ.
ಎರಡು ದಿನದ ವಿಶ್ರಾಂತಿ ಬಳಿಕ ಆರಂಭವಾದ ಯಾತ್ರೆಯಲ್ಲಿ ಅಪಾರ ಸಂಖ್ಯೆಯ ಜನ ಭಾಗಿಯಾಗಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಸೋನಿಯಾ ಗಾಂಧಿ ಅವರೂ ಭಾಗವಹಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತಂದಿದೆ.