
ನವದೆಹಲಿ: ಛತ್ತೀಸ್ ಗಢ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಜೋರಾಗಿದೆ. ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಅವರಿಗೆ ಗೇಟ್ ಪಾಸ್ ನೀಡಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ತಿಂಗಳ ಅಂತ್ಯದೊಳಗೆ ರಾಜೀನಾಮೆ ನೀಡುವಂತೆ ಛತ್ತೀಸ್ ಗಢ ಸಿಎಂ ಭೂಪೇಶ್ ಬಾಘೆಲ್ ಅವರಿಗೆ ಸೂಚನೆ ನೀಡಿದ್ದಾರೆ. ಸಚಿವ ಟಿ.ಎಸ್. ಸಿಂಗ್ ದೇವ್ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಲಾ ಎರಡೂವರೆ ವರ್ಷ ಅಧಿಕಾರ ಹಂಚಿಕೆಯ ಸೂತ್ರ ನೀಡಿದ್ದು, ಭೂಪೇಶ್ ಬಾಘೆಲ್ ಅವರ ಅವಧಿ ಮುಕ್ತಾಯಗೊಂಡಿದೆ. ಹೀಗಾಗಿ ಅಧಿಕಾರ ಬಿಟ್ಟು ಕೊಡಬೇಕೆಂಬ ಒತ್ತಾಯ ಬಲವಾಗಿ ಕೇಳಿ ಬಂದಿದ್ದು, ಬಣ ರಾಜಕೀಯ ಜೋರಾಗಿದ್ದರಿಂದ ರಾಜೀನಾಮೆಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.