alex Certify ಬಿರುಸುಗೊಂಡ ಬಣ ರಾಜಕೀಯ, ಶೀಘ್ರವೇ ಸಿಎಂಗೆ ಗೇಟ್ ಪಾಸ್..? ಛತ್ತೀಸ್ ಗಢದಲ್ಲಿ ಅಧಿಕಾರ ಹಂಚಿಕೆ ಸೂತ್ರದಂತೆ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿರುಸುಗೊಂಡ ಬಣ ರಾಜಕೀಯ, ಶೀಘ್ರವೇ ಸಿಎಂಗೆ ಗೇಟ್ ಪಾಸ್..? ಛತ್ತೀಸ್ ಗಢದಲ್ಲಿ ಅಧಿಕಾರ ಹಂಚಿಕೆ ಸೂತ್ರದಂತೆ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಸೂಚನೆ

ನವದೆಹಲಿ: ಛತ್ತೀಸ್ ಗಢ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಜೋರಾಗಿದೆ. ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಅವರಿಗೆ ಗೇಟ್ ಪಾಸ್ ನೀಡಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ತಿಂಗಳ ಅಂತ್ಯದೊಳಗೆ ರಾಜೀನಾಮೆ ನೀಡುವಂತೆ ಛತ್ತೀಸ್ ಗಢ ಸಿಎಂ ಭೂಪೇಶ್ ಬಾಘೆಲ್ ಅವರಿಗೆ ಸೂಚನೆ ನೀಡಿದ್ದಾರೆ. ಸಚಿವ ಟಿ.ಎಸ್. ಸಿಂಗ್ ದೇವ್ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಲಾ ಎರಡೂವರೆ ವರ್ಷ ಅಧಿಕಾರ ಹಂಚಿಕೆಯ ಸೂತ್ರ ನೀಡಿದ್ದು, ಭೂಪೇಶ್ ಬಾಘೆಲ್ ಅವರ ಅವಧಿ ಮುಕ್ತಾಯಗೊಂಡಿದೆ. ಹೀಗಾಗಿ ಅಧಿಕಾರ ಬಿಟ್ಟು ಕೊಡಬೇಕೆಂಬ ಒತ್ತಾಯ ಬಲವಾಗಿ ಕೇಳಿ ಬಂದಿದ್ದು, ಬಣ ರಾಜಕೀಯ ಜೋರಾಗಿದ್ದರಿಂದ ರಾಜೀನಾಮೆಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...