
ಛತ್ತೀಸ್ ಗಢ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಛತ್ತೀಸ್ ಗಢದ ರಾಯ್ಪುರ ಹಾಗೂ ಭಿಲಾಯಿಯಲ್ಲಿರುವ ಬಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಇದೇ ವೇಳೆ ಬಘೇಲ್ ಅವರ ಆಪ್ತರ ಮನೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಇಡಿ ಅಧಿಕಾರಿಗಳು ಭೂಪೇಶ್ ಬಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.