
ರಾಮನಗರ: ಬಿಡದಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕಾರ್ಖಾನೆಯೊಂದರ ಶೌಚಾಲಯದಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ಬರೆಯಲಾಗಿದೆ.
ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನಕ್ಕೆ ಜೈ , ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆಯಲಾಗಿದೆ. ದೇಶದ್ರೋಹದ ಬರಹದ ಜೊತೆಗೆ ಕಿಡಿಗೇಡಿಗಳು ಕನ್ನಡಿಗರ ಬಗ್ಗೆಯೂ ಅವಾಚ್ಯವಾಗಿ ಬರೆದಿದ್ದಾರೆ.
ಕಾರ್ಖಾನೆಯಲ್ಲಿ ಕೆಲಸ ಮಾಡಿವ ಕಿಡಿಗೇಡಿಗಳ್ಯಾರೋ ಈ ಬರಹ ಬರೆದಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳ ಕೃತ್ಯವನ್ನು ಕಾರ್ಖಾನೆ ಆಡಳಿತ ಮಂಡಳಿ ನೋಟಿಸ್ ಬೋರ್ಡ್ ನಲ್ಲಿ ಹಾಕಿದ್ದು, ಇಂತಹ ಕೃತ್ಯ ಕಾರ್ಖಾನೆಯ ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿಯನ್ನು ಸೃಷ್ಟಿಸುವುದಲ್ಲದೇ. ದೇಶದ್ರೋಹಿ ಅಪರಧವಾಗುತ್ತದೆ. ಅಂತಹ ಕಾರ್ಮಿಕರನ್ನು ಕಾನೂನು ಚೌಕಟ್ಟಿನಲ್ಲಿ ದೇಶದ್ರೋಹಿ ಎಂದು ಪೊಲೀಸರಿಗೆ ಒಪ್ಪಿಸಿ ಜೈಲು ಶಿಕ್ಷೆಯಾಗುವಂತೆ ಕ್ರಮ ವಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದೆ.