
ರಾಮನಗರ: ರಾಮನಗರ ಜಿಲ್ಲೆಯ ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಬೆದರಿಕೆಯೊಡ್ದಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ರೈಲು ನಿಲ್ದಾಣ, ಪ್ರಯಾಣಿಕರು ಹಾಗೂ ರೈಲುಗಳನ್ನು ತಪಾಸಣೆ ನಡೆಸಿದ್ದಾರೆ.