alex Certify ಬೀದರ್ ಎಟಿಎಂ ಹಣ ದರೋಡೆ: ಮೃತ ಸಿಬ್ಬಂದಿ ಕುಟುಂಬಕ್ಕೆ 18 ಲಕ್ಷ ರೂ. ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀದರ್ ಎಟಿಎಂ ಹಣ ದರೋಡೆ: ಮೃತ ಸಿಬ್ಬಂದಿ ಕುಟುಂಬಕ್ಕೆ 18 ಲಕ್ಷ ರೂ. ಪರಿಹಾರ ಘೋಷಣೆ

ಬೀದರ್: ಬೀದರ್ ನಲ್ಲಿ ಬ್ಯಾಂಕ್ ಎಟಿಎಂ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ 83 ಲಕ್ಷ ದೂ. ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಿಬ್ಬಂದಿಯ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಸಮಾಜ ಕಲ್ಯಾಣ ಇಲಾಖೆ ಪ್ರತ್ಯೇಕವಾಗಿ 8 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಗುಂಡೇಟಿಗೆ ಬಲಿಯಾದ ಸಿಬ್ಬಂದಿ ಗಿರಿ ವೆಂಕಟೇಶ್ ಅವರ ಮನೆಗೆ ಭೇಟಿ ನೀಡಿದ ಸಚಿವರು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಮಗ್ರ ಪರಿಹಾರ ಒದಗಿಸಲು ಬದ್ಧವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ 8 ಲಕ್ಷ ರೂ. ಪರಿಹಾರ ಮತ್ತು ಹೆಚ್ಚುವರಿಯಾಗಿ 10 ಲಕ್ಷ ರೂ., ಪಿಂಚಣಿ ಹಾಗೂ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ, ತಾತ್ಕಾಲಿಕವಾಗಿ ಕುಟುಂಬದವರಿಗೆ ಉದ್ಯೋಗ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ದುರಂತಕ್ಕೆ ಕಾರಣವಾದ ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವುದಾಗಿ ತಿಳಿಸಿ, ಕುಟುಂಬದ ನೋವಿನಲ್ಲಿ ಸರ್ಕಾರ ಮತ್ತು ತಾವೂ ಕೂಡ ಸದಾ ಜೊತೆಯಲ್ಲಿದ್ದೆವೆ ಎಂದು ಭರವಸೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...