
ಬೀದರ್: ಪಾಕಿಸ್ತಾನ -ಪಂಜಾಬ್ ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಕರ್ತವ್ಯನಿರತ ಯೋಧ ಬೀದರ್ ಜಿಲ್ಲೆಯ ಬಸವರಾಜ ಅವರು ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ.
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಆಲೂರು ಗ್ರಾಮದ ಬಸವರಾಜ ಕಳೆದ 8 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪಂಜಾಬ್ ಗಡಿಯಲ್ಲಿ ಕರ್ತವ್ಯನಿರತರಾಗಿದ್ದ ಸಂದರ್ಭದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯ ವೇಳೆ ಯೋಧ ಬಸವರಾಜ ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ.