ಬೀದರ್: ಬೀದರ್ ತಾಲೂಕಿನ ಕಂಗಟಿ ಗ್ರಾಮದಲ್ಲಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರು ಪಾಲಾಗಿದ್ದಾರೆ.
ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ನೀರು ಪಾಲಾಗಿದ್ದಾರೆ. ಸುನೀತಾ(32), ಪುತ್ರ ನಾಗಶೆಟ್ಟಿ(12), ಆನಂದಾ(33), ಪ್ರಜ್ವಲ್(14) ನೀರು ಪಾಲಾದವರು ಎಂದು ಹೇಳಲಾಗಿದೆ. ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.