ಬೀದರ್: ಬೀದರ್ ನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಎಂಎಸ್ ಕಂಪನಿ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿ 83 ಲಕ್ಷ ರೂಪಾಯಿ ಹಣದೊಂದಿಗೆ ಪರಾರಿಯಾಗಿದ್ದ ಖದೀಮರು ಈವರೆಗೂ ಪತ್ತೆಯಾಗಿಲ್ಲ. ಈ ನಡುವೆ ಇಬ್ಬರು ದರೋಡೆಕೋರರ ಭಾವಚಿತ್ರ ಬಿಡುಗಡೆ ಮಾಡಿರುವ ಪೊಲಿಸರು ಆರೋಪಿಗಳ ಸುಳಿವು ನೀಡಿದವರಿಗೆ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದ್ದಾರೆ.
ಬೀದರ್ ನಲ್ಲಿ ಹಣ ದೋಚಿ ಪರಾರಿಯಾಗಿದ್ದ ದರೋಡೆಕೋರರು ಹೈದರಾಬಾದ್ ನತ್ತ ಎಸ್ಕೇಪ್ ಆಗಿದ್ದರು. ಆದರೆ ಈವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಆರೋಪಿಗಳನ್ನು ಬಿಹಾರ ಮೂಲದ ಅಮನ್ ಕುಮಾರ್, ಅಲೋಕ್ ಕುಮಾರ್ ಎಂದು ಗುರುತಿಸಲಾಗಿದೆ.
ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.
ಜನವರಿ 16ರಂದು ಹಾಡಹಗಲೇ ಬಿದರ್ ನಲ್ಲಿ ಎಟಿಎಂಗೆ ಹಣ ತುಂಬಲು ಬಂದ ಸಿಬ್ಬಂದಿಗಳನ್ನು ಕೊಂದು ದರೋಡೆಕೋರರು ಹಣ ದೋಚಿ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದರು.