
ಬೀದರ್: ಜೋತು ಬಿದ್ದ ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಬೀದರ್ ನ ಮುನ್ನಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮಲ್ಲಿಕಾರ್ಜುನ (61) ಶರಣಮ್ಮ (50) ಮೃತರು. ಜಮೀನಿಗೆ ಹೋಗಿದ್ದಾಗ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ್ದಾರೆ. ಈ ವೇಳೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮುನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.