
ಸೂರಿ ಕುಂದರ್ ನಿರ್ದೇಶನದ ‘ಜಿಗರ್’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ಅಕ್ಟೋಬರ್ 27ಕ್ಕೆ ಈ ಸಿನಿಮಾದ ಟ್ರೈಲರ್ ಅಥವಾ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಒಟ್ಟಾರೆ ಬಿಗ್ ಅನೌನ್ಸ್ಮೆಂಟ್ ನೀಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಯುಕೆ ಪ್ರೊಡಕ್ಷನ್ ಬ್ಯಾನರ್ ನಡಿ ಪೂಜಾ ವಸಂತ್ ಕುಮಾರ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಪ್ರವೀಣ್ ತೇಜ್ ಮತ್ತು ವಿಜಯ್ ಶ್ರೀ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವಸೇನಾ ಅವರ ಛಾಯಾಗ್ರಹಣವಿದ್ದು, ರಿತ್ವಿಕ್ ಮುರಳಿಧರ್ ಅವರ ಸಂಗೀತವಿದೆ.
