ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ದೇಗುಲೂರಿನ ಶಾಸಕ ಜಿತೇಶ್ ಅಂತಪುರ್ಕರ್ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದೆ.
ಶಾಸಕ ಜಿತೇಶ್ ಅಂತಪುರ್ಕರ್ ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ತಮ್ಮ ಹಲವಾರು ಬೆಂಬಲಿಗರೊಂದಿಗೆ ಪ್ರಮುಖ ಬಿಜೆಪಿ ನಾಯಕರಾದ ದೇವೇಂದ್ರ ಫಡ್ನವಿಸ್, ಚಂದ್ರಶೇಖರ್ ಬಾವಾಂಕುಲೆ ಮತ್ತು ಅಶೋಕ್ ಚವಾಣ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಬೆಳವಣಿಗೆಯಿಂದಾಗಿ ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾದಂತಾಗಿದೆ.