alex Certify ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಜನ್ -10ರ ವಿನ್ನರ್ ಕಾರ್ತಿಕ್ ಮಹೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ನಟ ಕಾರ್ತಿಕ್ ಮಹೇಶ್, ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆಶಿರ್ವಾದ ಪಡೆದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಒಳ್ಳೆಯದಾಗಲಿ, ಸಿನಿಮಾ ರಂಗದಲ್ಲಿ ಒಳ್ಳೆಯ ಹೆಸರು ಮಾಡು ಎಂದು ಶುಭ ಹಾರೈಸಿದ್ದಾರೆ.

ಈ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ.ಹರೀಶ್, ಉಲ್ಲಾಸ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಬಿಗ್ ಬಾಸ್ ಗೆದ್ದ ಬಳಿಕ ಕಾರ್ತಿಕ್ ಮಹೇಶ್ ಜನಪ್ರಿಯತೆ ಹೆಚ್ಚಿದ್ದು, ಹಿರಿಯ ನಟರನ್ನು, ರಾಜಕಾರಣಿಗಳು ಭೇಟಿಯಾಗಿ ಆಶಿರ್ವಾದ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...