alex Certify BIG BREAKIG: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಹೆಚ್ಚಳ; ಒಂದೇ ದಿನದಲ್ಲಿ 22,775 ಜನರಲ್ಲಿ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKIG: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಹೆಚ್ಚಳ; ಒಂದೇ ದಿನದಲ್ಲಿ 22,775 ಜನರಲ್ಲಿ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ರೂಪಾಂತರಿ ವೈರಸ್ ನಡುವೆಯೇ ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 22,775 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 406 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 481486 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11,10,855 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8949 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 481486 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,10,855 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 58,11,487 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,45,16,24,150 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...