alex Certify BIG BREAKIG: ಕೋವಿಡ್ ಸೋಂಕಿತರ ಸಂಖ್ಯೆ ಕುಸಿತ; ಆದರೆ ಮತ್ತಷ್ಟು ಏರಿಕೆಯಾಯ್ತು ಮಹಾಮಾರಿಗೆ ಬಲಿಯಾದವರ ಸಂಖ್ಯೆ; ಒಂದೇ ದಿನದಲ್ಲಿ 315 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKIG: ಕೋವಿಡ್ ಸೋಂಕಿತರ ಸಂಖ್ಯೆ ಕುಸಿತ; ಆದರೆ ಮತ್ತಷ್ಟು ಏರಿಕೆಯಾಯ್ತು ಮಹಾಮಾರಿಗೆ ಬಲಿಯಾದವರ ಸಂಖ್ಯೆ; ಒಂದೇ ದಿನದಲ್ಲಿ 315 ಜನ ಸಾವು

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,531 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು ಒಂದೇ ದಿನದಲ್ಲಿ 24 ಗಂಟೆಯಲ್ಲಿ 315 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 479997 ಕ್ಕೆ ಏರಿಕೆಯಾಗಿದೆ.

ಅತ್ಯಾಚಾರ ಸಂತ್ರಸ್ತೆ ವಿಚಾರಿಸಲು ಮನೆಗೆ ಬಂದು ಪದೇ ಪದೇ ಅತ್ಯಾಚಾರ ಎಸಗಿದ ಪೊಲೀಸ್ ಕೊಲೆ ಬೆದರಿಕೆ: ಮಹಿಳೆ ದೂರು

ಇನ್ನು ದೇಶದಲ್ಲಿ 75841 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7141 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34237495 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 7,52,935 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 29,93,283 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,41,70,25,654 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...