alex Certify BIG BREAKING: ಮತ್ತೆ ಹೆಚ್ಚುತ್ತಿದೆ ಕೊರೊನಾ ಅಟ್ಟಹಾಸ; ಒಂದೇ ದಿನದಲ್ಲಿ 33,750 ಜನರಲ್ಲಿ ಸೋಂಕು ಪತ್ತೆ; ಕ್ಷಣ ಕ್ಷಣಕ್ಕೂ ಹೆಚ್ಚಿದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ ಹೆಚ್ಚುತ್ತಿದೆ ಕೊರೊನಾ ಅಟ್ಟಹಾಸ; ಒಂದೇ ದಿನದಲ್ಲಿ 33,750 ಜನರಲ್ಲಿ ಸೋಂಕು ಪತ್ತೆ; ಕ್ಷಣ ಕ್ಷಣಕ್ಕೂ ಹೆಚ್ಚಿದ ಆತಂಕ

ನವದೆಹಲಿ: ರೂಪಾಂತರಿ ವೈರಸ್ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 33,750 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 123 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 481893 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 145582 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10846 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34295407 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 8,78,990 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 23,30,706 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,45,68,89,306 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...