alex Certify BIG BREAKING: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಮೋಹಕ ತಾರೆ ರಮ್ಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಮೋಹಕ ತಾರೆ ರಮ್ಯಾ

ಬೆಂಗಳೂರು: ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಗಣೇಶ ಚತುರ್ಥಿಯ ಶುಭ ಸಂದರ್ಭದ ವೇಳೆ ಅಭಿಮಾನಿಗಳಿಗೆ ಸಿಹಿ ಸುದ್ದಿ ಘೋಷಿಸಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಾಪಕಿಯಾಗಿಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಡುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ನಟಿ ರಮ್ಯಾ, ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು.’ಸಿಹಿ ಸುದ್ದಿ’ಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟಡಿಯೋಸ್‌ನ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ.

ಏನಿದು ಆಪಲ್ ಬಾಕ್ಸ್? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ, ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ – ಈ ಪೆಟ್ಟಿಗೆಯ ಸರಳತೆ ನನಗೆ ಸದಾ ಸ್ಪೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ.

ಪ್ರಸ್ತುತ, ಅಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ ಒ.ಟಿ.ಟಿ ಪ್ಲಾಟ್ ಫಾರಂಗಳಿಗಾಗಿ ಸಿನಿಮಾ ಹಾಗು ವೆಬ್ ಸೀರೀಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟಡಿಯೋಸ್ ಸಿದ್ಧವಾಗುತ್ತಿದೆ.

ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್‌ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ.

ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತ್ಪೂರ್ವಕ ವಂದನೆಗಳು. ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು. ಇದರ ಜೊತೆಗೆ ವಿಜಯ ಕಿರಗಂದೂರ್, ಜಯಣ್ಣ, ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು. ಹೊಸ ಆರಂಭದತ್ತ ಹೆಜ್ಜೆ ಇಡುತ್ತಾ…. ಕೃತಜ್ಞತೆಗಳೊಂದಿಗೆ…. ಎಂದು ರಮ್ಯಾ ಭರ್ಜರಿ ಸಿಹಿ ಸುದ್ದಿಯೊಂದಿಗೆ ಚಿತ್ರರಂಗಕ್ಕೆ ಮತ್ತೆ ಎಂಟ್ರಿಯಾಗಿದ್ದಾರೆ.

https://mobile.twitter.com/divyaspandana/status/1564851760807948293

https://mobile.twitter.com/divyaspandana/status/1564851760807948293

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...