ಬೆಂಗಳೂರು: ರಾಜ್ಯದಲ್ಲಿ 2 ಹಂತಗಳಲ್ಲಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಆಗಸ್ಟ್ 23ರಿಂದ ಶಾಲೆ-ಕಾಲೇಜುಗಳು ಆರಂಭವಾಗಲಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಆಗಸ್ಟ್ 23ರಿಂದ 9, 10, 11 ಹಾಗೂ 12 ನೇ ತರಗತಿಗಳು ಆರಂಭವಾಗಲಿವೆ. ಬ್ಯಾಚ್ ವೈಸ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.
BIG BREAKING: ರಾಜ್ಯಾದ್ಯಂತ ನೈಟ್ ಕರ್ಫ್ಯೂ; ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ
ಇನ್ನು ಪ್ರಾಥಮಿಕ ಶಾಲೆಗಳು ಅಂದರೆ 1ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ತೆರೆಯುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ, ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.