alex Certify BIG BREAKING: ಇನ್ನಷ್ಟು ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ ಸದ್ದಿಲ್ಲದೇ ಆರಂಭವಾಗಿದೆಯೇ 3ನೇ ಅಲೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇನ್ನಷ್ಟು ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ ಸದ್ದಿಲ್ಲದೇ ಆರಂಭವಾಗಿದೆಯೇ 3ನೇ ಅಲೆ…?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ 44,230 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 555 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 423217 ಕ್ಕೆ ಏರಿಕೆಯಾಗಿದೆ.

ಕ್ವಾರಂಟೈನ್ ಅವಧಿಯ ಮದುವೆಗಳಿಗೆ ನೀಡಬಹುದಾದ ಬೆಸ್ಟ್​​ ಗಿಫ್ಟ್​​​ಗಳು ಇಲ್ಲಿದೆ ನೋಡಿ….!

ಇನ್ನು ದೇಶದಲ್ಲಿ 405155 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 42360 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30743972 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 18,16,277 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24ಗಂಟೆಯಲ್ಲಿ 51,83,180 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 45,60,33,754 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...