
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 18 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,873 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 76700 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8,537 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,07,900 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 2,80,136 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,18,66,707 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 2,96,050 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.