alex Certify Big Breaking: ಈಶ್ವರಪ್ಪ ರಾಜೀನಾಮೆಗೂ ಮುನ್ನ ಸಿಎಂ ನಿವಾಸದ ಮುಂದೆ ಹೈಡ್ರಾಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ಈಶ್ವರಪ್ಪ ರಾಜೀನಾಮೆಗೂ ಮುನ್ನ ಸಿಎಂ ನಿವಾಸದ ಮುಂದೆ ಹೈಡ್ರಾಮಾ

ಸಚಿವ ಈಶ್ವರಪ್ಪನವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಮುಂದೆ ಜಮಾಯಿಸಿದ್ದ ಈಶ್ವರಪ್ಪ ಅವರ ಸಾವಿರಾರು ಬೆಂಬಲಿಗರು ರಾಜೀನಾಮೆ ಅಂಗೀಕರಿಸದಂತೆ ಘೋಷಣೆಗಳನ್ನು ಕೂಗಿದ್ದಾರೆ.

ಇಂದು ಮಧ್ಯಾಹ್ನ ಶಿವಮೊಗ್ಗದಿಂದ ಸಹಸ್ರಾರು ಬೆಂಬಲಿಗರ ಜೊತೆ ಬೆಂಗಳೂರಿಗೆ ಆಗಮಿಸಿದ ಈಶ್ವರಪ್ಪನವರು ತಮ್ಮ  ಒಂದು ಸಾಲಿನ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಲ್ಲಿಸಿದ್ದಾರೆ.

ಅದಕ್ಕೂ ಮುನ್ನ ಸಿಎಂ ನಿವಾಸದ ಎದುರು ಹೈಡ್ರಾಮಾ ನಡೆದಿದ್ದು, ಈಶ್ವರಪ್ಪ ಬೆಂಬಲಿಗರು ಯಾವುದೇ ಕಾರಣಕ್ಕೂ ರಾಜೀನಾಮೆ ಬೇಡ. ಈಶ್ವರಪ್ಪ ಜಿಂದಾಬಾದ್‌, ಅನ್ಯಾಯ, ಅನ್ಯಾಯ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...