ಸಚಿವರಾಗಿದ್ದ ಈಶ್ವರಪ್ಪ, ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಶಿವಮೊಗ್ಗದಿಂದ ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಕೆ.ಎಸ್. ಈಶ್ವರಪ್ಪನವರು ರಾಜೀನಾಮೆ ಪತ್ರ ಸಲ್ಲಿಸಲು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ತೆರಳಿದ ವೇಳೆ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಪುತ್ರ ಕಾಂತೇಶ್ ಸೇರಿದಂತೆ ಸಾವಿರಾರು ಬೆಂಬಲಿಗರೊಂದಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಈಶ್ವರಪ್ಪನವರು ಆಗಮಿಸಿದ್ದು, ಮಾರ್ಗ ಮಧ್ಯೆ ತುಮಕೂರಿನ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.