ನಿನ್ನೆಯಷ್ಟೇ ಕರ್ನಾಟಕ ಮೂಲದ ವೈದ್ಯಕೀಯ ವಿದ್ಯಾರ್ಥಿ ಯುದ್ಧಪೀಡಿತ ಉಕ್ರೇನ್ ನಲ್ಲಿ ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೇ ಇಂದು ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವಿಗೀಡಾಗಿರುವುದು ತಿಳಿದು ಬಂದಿದೆ.
ಪಂಜಾಬ್ನ ಬರ್ನಾಲ್ ಗ್ರಾಮದ 22 ವರ್ಷದ ಚಂದನ್ ಜಿಂದಾಲ್ ಮೃತ ವಿದ್ಯಾರ್ಥಿಯಾಗಿದ್ದು, ಮಂಗಳವಾರದಂದು ಕನ್ನಡಿಗ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದರು.
ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಆಘಾತಕ್ಕೊಳಗಾಗಿದ್ದ ಚಂದನ್ ಜಿಂದಾಲ್ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಪ್ರಯೋಜನವಾಗದೆ ಇಂದು ಸಾವಿಗೀಡಾಗಿದ್ದಾರೆ.
ಕನ್ನಡಿಗ ವಿದ್ಯಾರ್ಥಿ ನವೀನ್ ದಿನಸಿ ತರಲೆಂದು ಹೊರ ಹೋದ ವೇಳೆ ರಷ್ಯನ್ನರು ನಡೆಸಿದ ಷೆಲ್ ದಾಳಿಯಿಂದಾಗಿ ಮಂಗಳವಾರದಂದು ಮೃತಪಟ್ಟಿದ್ದರು.