ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಣೆ ಬೆನ್ನಲ್ಲೇ ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರಿ ಏರಿಕೆಯಾಗಿದೆ. ಅಲ್ಲದೇ ಕಚ್ಚಾ ತೈಲದ ಬೆಲೆಯಲ್ಲಿಯೂ ಹೆಚ್ಚಳವಾಗಿದೆ.
ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಮಿಲಿಟರಿ ದಾಳಿ ಘೋಷಿಸುತ್ತಿದ್ದಂತೆ 24 ಗಂಟೆಯಲ್ಲಿ ಚಿನ್ನದ ದರ ಗಗನಮುಖಿಯಾಗಿದೆ. 24 ಕ್ಯಾರಟ್ 10ಗ್ರಾಂ ಚಿನ್ನಕ್ಕೆ 2,000 ರೂಪಾಯಿ ಏರಿಕೆಯಾಗಿದೆ. ಈ ಮೂಲಕ 24 ಕ್ಯಾರಟ್ ಚಿನ್ನದ ದರ 10 ಗ್ರಾಂ ಗೆ 51,110 ರೂಪಾಯಿ ಆಗಿದೆ.
ಇನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಒಂದು ಬ್ಯಾರಲ್ ಕಚ್ಚಾ ತೈಲ ದರ 100 ಡಾಲರ್ ಗಡಿ ದಾಟಿದೆ.