ಲಖ್ನೋ: ನಮಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ. ಚುನಾವಣೆಯ ವೇಳೆ ಇವಿಎಂ ಟ್ಯಾಂಪರಿಂಗ್ ಮಾಡಲಾಗಿದೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.
ಸ್ಥಳೀಯ ಅಭ್ಯರ್ಥಿಗಳಿಗೆ ಕೂಡ ಮಾಹಿತಿ ನೀಡದೆ ಇವಿಎಂ ರವಾನೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಮಾರ್ಚ್ 7 ರಂದು ಮುಕ್ತಾಯವಾಗಿದ್ದು, ಮರುದಿನ ಅಖಿಲೇಶ್ ಯಾದವ್ ಚುನಾವಣಾ ಆಯೋಗದ ವಿರುದ್ಧ ಇಂತಹುದೊಂದು ಗಂಭೀರ ಆರೋಪ ಮಾಡಿದ್ದಾರೆ.
ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಸಮಾಜವಾದಿಪಕ್ಷ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಇದರ ಬೆನ್ನಲ್ಲೇ ಅಖಿಲೇಶ್ ಯಾದವ್ ಚುನಾವಣಾ ಆಯೋಗದ ವಿರುದ್ಧ ಇವಿಎಂ ಟ್ಯಾಂಪರಿಂಗ್ ಆರೋಪ ಮಾಡಿದ್ದಾರೆ.
ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷ ಗೆಲ್ಲುತ್ತಿದೆ. ಹಾಗಾಗಿ ಬಿಜೆಪಿಗೆ ಭಯವಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥರಾಗಿರುವ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ಎಕ್ಸಿಟ್ ಪೋಲ್‌ಗಳು ಬಿಜೆಪಿ ಗೆಲ್ಲುತ್ತದೆ ಎಂಬ ಗ್ರಹಿಕೆಯನ್ನು ಸೃಷ್ಟಿಸಲು ಬಯಸುತ್ತವೆ. ಇದು ಪ್ರಜಾಪ್ರಭುತ್ವದ ಕೊನೆಯ ಹೋರಾಟ. ಅಭ್ಯರ್ಥಿಗಳಿಗೆ ಮಾಹಿತಿ ನೀಡದೆ ಇವಿಎಂ ಸಾಗಿಸಲಾಗುತ್ತಿದೆ ಎಂದು ಸಮಾಜವಾದಿ ಮುಖ್ಯಸ್ಥರಾಗಿರುವ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ವಾರಣಾಸಿ ಡಿಎಂ ಸ್ಥಳೀಯ ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ ಇವಿಎಂಗಳನ್ನು ಸಾಗಿಸುತ್ತಿದ್ದಾರೆ, ಇಸಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇವಿಎಂಗಳನ್ನು ಈ ರೀತಿ ಸಾಗಿಸುತ್ತಿದ್ದರೆ ನಾವು ಎಚ್ಚರದಿಂದಿರಬೇಕು. ಇದು ಕಳ್ಳತನ, ನಾವು ನಮ್ಮ ಮತಗಳನ್ನು ಉಳಿಸಬೇಕಾಗಿದೆ. ನಾವು ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಬಹುದು. ಆದರೆ, ಅದಕ್ಕೂ ಮೊದಲು, ಪ್ರಜಾಪ್ರಭುತ್ವವನ್ನು ಉಳಿಸಲು ನಾನು ಜನರಲ್ಲಿ ಮನವಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷ ಗೆಲ್ಲುತ್ತಿದೆ. ಹಾಗಾಗಿ ಬಿಜೆಪಿಗೆ ಭಯವಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥರಾಗಿರುವ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.