ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಹಾಗೂ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಹೆಚ್ಚು ಕಡಿಮೆ ಸಮಬಲದಲ್ಲಿಯೇ ಮುಂದುವರೆದಿವೆ.
ಈ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿ ಕೂಟ ಅತಿ ಹೆಚ್ಚು ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದ್ದು, ಆದರೆ ಚುನಾವಣಾ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ಅಧಿಕಾರ ವಿಚಾರದ ಸಂದರ್ಭದಲ್ಲಿ ಉಲ್ಟಾ ಹೊಡೆಯುವ ಭೀತಿಯು ಇದೆ.
ಅದರಲ್ಲೂ ಬಿಹಾರದ ನಿತೀಶ್ ಕುಮಾರ್ ಹಾಗೂ ಟಿಡಿಪಿ ಪಕ್ಷದ ಚಂದ್ರಬಾಬು ನಾಯ್ಡು ಸರ್ಕಾರ ರಚನೆ ಸಂದರ್ಭದಲ್ಲಿ ತಮ್ಮ ತಮ್ಮ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲು ಷರತ್ತುಗಳನ್ನು ವಿಧಿಸುವ ಸಾಧ್ಯತೆ ಇದೆ. ಹೀಗಾಗಿ ಎನ್ ಡಿ ಎ ಮೈತ್ರಿಕೂಟದ ಸಂಚಾಲಕರನ್ನಾಗಿ ಚಂದ್ರಬಾಬು ನಾಯ್ಡು ಅವರನ್ನೇ ನೇಮಕ ಮಾಡಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಈ ನಿಟ್ಟಿನಲ್ಲಿ ಚಂದ್ರಬಾಬು ನಾಯ್ಡು ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.