ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಸಂಸ್ಥಾಪಕ ಶರದ್ ಪವಾರ್ ರಾಜೀನಾಮೆ ಘೋಷಿಸಿದ್ದಾರೆ.
ಸಹೋದರನ ಪುತ್ರ ಅಜಿತ್ ಪವಾರ್ ತಮ್ಮ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸುತ್ತಾರೆ ಎಂಬ ವದಂತಿ ನಡುವೆ ಈ ಬೆಳವಣಿಗೆ ನಡೆದಿದೆ.
ಶರದ್ ಪವಾರ್ ರಾಜೀನಾಮೆಯಿಂದ ತೆರವಾಗಲಿರುವ ಸ್ಥಾನಕ್ಕೆ ಯಾರು ಬರಲಿದ್ದಾರೆ ಎಂಬ ಕುತೂಹಲ ಈಗ ಮನೆ ಮಾಡಿದೆ.
https://twitter.com/ANI/status/1653298878916218882