ಬೆಂಗಳೂರು; ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ಬಿಜೆಪಿ 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ಶಿಗ್ಗಾವಿ ಹಾಗೂ ದಾವಣಗೆರೆ ಉತ್ತರ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
‘ಉಕ್ರೇನ್ನಿಂದ ವಾಪಸ್ಸಾದವನು ನನ್ನ ಪುತ್ರನಲ್ಲ, ಮೋದಿ ಪುತ್ರ’: ಭಾವುಕ ತಂದೆಯ ನುಡಿ
ಈ ಕುರಿತು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಕೂಡ ಸ್ಪಷ್ಟಪಡಿಸಿದ್ದು, ದಾವಣಗೆರೆ ಉತ್ತರ ಕ್ಷೇತ್ರದಿಂದಲೂ ಸಿಎಂ ಸ್ಪರ್ಧಿಸುವುದು ಖಚಿತವಾಗಿದೆ. ನಮ್ಮ ಕ್ಷೇತ್ರದಿಂದ ಬೊಮ್ಮಾಯಿ ಸ್ಪರ್ಧಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಈ ಬಗ್ಗೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳಿದರು.
ಇದೆ ವೇಳೆ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್, ಸಿಎಂ ಬೊಮ್ಮಾಯಿ ನಮ್ಮ ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ಅವರನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ. ದಾವಣಗೆರೆ ಉತ್ತರದಿಂದ ಸಿಎಂ ಸ್ಪರ್ಧೆ ವಿಚಾರ ನನಗೆ ಸಂಸದ ಸಿದ್ದೇಶ್ವರ್ ಅವರಿಂದ ಗೊತ್ತಾಗಿದೆ. ಇದು ಸಂತಸದ ವಿಚಾರ ಎಂದು ಹೇಳಿದರು.