alex Certify BIG BREAKING: ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿ; ದೇವೇಂದ್ರ ಫಡ್ನವಿಸ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿ; ದೇವೇಂದ್ರ ಫಡ್ನವಿಸ್ ಘೋಷಣೆ

ಮುಂಬೈ; ಶಿವಸೇನೆ ಬಂಡಾಯ ಶಾಸಕ ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.

ಏಕನಾಥ್ ಶಿಂಧೆ ಜತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಫಡ್ನವಿಸ್, ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ 7:30ಕ್ಕೆ ಶಿಂಧೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಿದರು.

ಹಿಂದುತ್ವಕ್ಕಾಗಿ ಏಕನಾಥ್ ಶಿಂಧೆ ಜತೆ ಬಿಜೆಪಿ ಕೈಜೋಡಿಸಿದೆ. ಶಿಂಧೆಗೆ ಬಿಜೆಪಿಯಿಂದ ಬಾಹ್ಯ ಬೆಂಬಲ ನೀಡುತ್ತೇವೆ. ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...