
ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದ್ದು, 24 ಗಂಟೆಯಲ್ಲಿ 39 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,116 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,04,555 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13,827 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,28,22,493 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 14,17,217 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,61,91,554 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,52,430 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.