
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. 24 ಗಂಟೆಯಲ್ಲಿ 38 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,557ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,36,076 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 16,482 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,30,28,356 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 13,44,714 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,99,27,27,559 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,94,774 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.