alex Certify BIG BREAKING: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 40 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 40 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕಳೆದ ಎರಡು ದಿನಗಳಿಂದ ಕೊರೊನಾ ಸೊಂಕಿತರ ಸಂಖ್ಯೆ ಕುಸಿತ ಕಂಡಿತ್ತು. ಆದರೆ ಇದೀಗ ಮತ್ತೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,517 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 40 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,28,388 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,43,091 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18,517 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,31,32,140 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 26,04,797 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,00,61,24,684 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,98,034 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...