
ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,965 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ 56,745 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,65,016 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 25,83,815 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,13,01,07,236 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,64,886 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.