alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಕಳೆದ ಎರಡು ದಿನಗಳಿಂದ ಕೊಂಚ ಕುಸಿತ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದ್ದು, 24 ಗಂಟೆಯಲ್ಲಿ 36 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,110 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,47,512 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18,159 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,32,46,829 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 30,42,476 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,02,50,57,717 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,26,102 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...