alex Certify BIG BREAKING: ಒಂದೇ ದಿನದಲ್ಲಿ ಮತ್ತೆ 1,581 ಜನರಲ್ಲಿ ಹೊಸದಾಗಿ ಕೋವಿಡ್ ಪತ್ತೆ; ದೇಶದ ಕೊರೊನಾ ಸೋಂಕಿನ ಸ್ಥಿತಿಗತಿ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 1,581 ಜನರಲ್ಲಿ ಹೊಸದಾಗಿ ಕೋವಿಡ್ ಪತ್ತೆ; ದೇಶದ ಕೊರೊನಾ ಸೋಂಕಿನ ಸ್ಥಿತಿಗತಿ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಭಾರಿ ಕುಸಿತ ಕಂಡಿದ್ದರೂ ಕಳೆದ 24 ಗಂಟೆಯಲ್ಲಿ ಮತ್ತೆ 1,581 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 33 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,16,543 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 23,913 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,741 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,70,515 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 30,58,879 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,81,56,01,944 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,68,471 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...