alex Certify BIG BREAKING: ಒಂದೇ ದಿನದಲ್ಲಿ ಮತ್ತೆ 20,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 20,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಸಾಂಕ್ರಾಮಿಕ ರೋಗಗಳು ಉಲ್ಭಣಿಸುವ ಆತಂಕ ಎದುರಾಗಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,038 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. 24 ಗಂಟೆಯಲ್ಲಿ 47 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,604 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,39,073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 16,994 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,30,45,350 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 18,92,969 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,99,47,34,994 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,50,820 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...