alex Certify BIG BREAKING: ಒಂದೇ ದಿನದಲ್ಲಿ ಮತ್ತೆ 20,400ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 20,400ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 20,409 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 47 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,258ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,43,988 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,33,09,484 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 38,63,960 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,03,60,46,307 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,98,761 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...